ಒಬ್ಬಿಬ್ಬರು ಹೋದರೆ ಪಕ್ಷಕ್ಕೆ ನಷ್ಟವಿಲ್ಲ ಅಂದ ಗೌಡ್ರು : ಯಾರಿದ್ದಾರೆ JDS ಲಿಸ್ಟ್ ನಲ್ಲಿ?

4
0

ಹಾಸನ: ಮಾಜಿ ಸಚಿವ ಜಿ.ಟಿ.ದೇವೇಗೌಡ ಬಿಜೆಪಿಯತ್ತ ಪರೋಕ್ಷವಾಗಿ ಒಲವು ತೋರಿರುವ ವಿಚಾರವಾಗಿ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅಸಮಾಧಾನ ವ್ಯಕ್ತಪಡಿಸಿದ್ದು, ಯಾರೋ ಒಬ್ಬರು, ಇಬ್ಬರು ಪಕ್ಷದಿಂದ ಹೊರ ಹೋದರೆ ಪಕ್ಷಕ್ಕೆ ನಷ್ಟವಿಲ್ಲ. ಆ ಬಗ್ಗೆ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ ಎಂದಿದ್ದಾರೆ.

ಭಾನುವಾರ ನಗರದ ರೈಲು ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿರಿಯರಾದ ಬಸವರಾಜ ಹೊರಟ್ಟಿ, ಬಂಡೆಪ್ಪ ಖಾಶೆಂಪುರ, ಎ.ಟಿ.ರಾಮಸ್ವಾಮಿ ಅಂತಹ ನಾಯಕರು ಈಗಲೂ ಇದ್ದಾರೆ. ಜಿ.ಟಿ.ದೇವೇಗೌಡ ಬಿಜೆಪಿಗೆ ಹೋಗಿ, ಮತ್ತೆ ಜೆಡಿಎಸ್‌ಗೆ ಬಂದು ಮಂತ್ರಿಯಾದರು. ಮತ್ತೆ ಇದೀಗ ಬಿಜೆಪಿಗೆ ಹೋಗುತ್ತಿದ್ದಾರೆ. ಯಾವುದೇ ತೊಂದರೆಯಿಲ್ಲ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here