ಗಣಿನಾಡು ಬಳ್ಳಾರಿಗೆ ಕಾಲಿಟ್ಟ ಕೊರೋನಾ: ಒಂದೇ ಕುಟುಂಬದ ಮೂವರಿಗೆ ಸೋಂಕು

6
0

ಬಳ್ಳಾರಿ: ಗಣಿನಾಡು ಬಳ್ಳಾರಿಗೆ ಡೆಡ್ಲಿ ಕೊರೋನಾ ವೈರಸ್ ವ್ಯಾಪಿಸಿದ್ದು, ಒಂದೇ ಕುಟುಂಬದ ಮೂವರಿಗೆ ಕೊರೋನಾ ಸೋಂಕು ತಗುಲಿರುವುದು ದೃಢವಾಗಿದೆ. ಈ ಬಗ್ಗೆ ಸ್ವತಃ ಆರೋಗ್ಯ ಸಚಿವ ಬಿ.ಶ್ರೀರಾಮುಲು ಟ್ವೀಟ್ ಮೂಲಕ ಖಚಿತಪಡಿಸಿದ್ದಾರೆ. ಅಲ್ಲದೇ ಈ ಬಗ್ಗೆ ಬಳ್ಳಾರಿ ಜಿಲ್ಲಾಧಿಕಾರಿ SS ನಕುಲ್ ಮಾಹಿತಿ ನೀಡಿದ್ದಾರೆ.

ಬಳ್ಳಾರಿ ಜಿಲ್ಲೆಯ ಹೊಸಪೇಟೆ ಒಂದೇ ಕುಟುಂಬದ ಮೂವರಿಗೆ ಕೊರೋನಾ ಸೋಂಕು ಇರುವುದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಐಸೋಲೇಶನ್ ವಾರ್ಡ್‌ಗೆ ಶಿಫ್ಟ್ ಮಾಡಲಾಗಿದೆ ಎಂದು ನಕುಲ್ ತಿಳಿಸಿದರು. ಹೊಸಪೇಟೆಯ ರಾಮಾ ಟಾಕೀಸ್ ಹಿಂಭಾಗದಲ್ಲಿರುವ ಎಸ್‌.ಆರ್.ನಗರದ ನಿವಾಸಿಗಳು. ಇವರು ಜಿಂದಾಲ್ ಹೊರಗುತ್ತಿಗೆ ನೌಕರರಾಗಿದ್ದು, ವಿದೇಶಕ್ಕೆ ಹೋಗಿ ಬಂದಿದ್ದರು.

ಇದೀಗ ಎಸ್‌.ಆರ್.ನಗರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದು, ಯಾರು ಸೋಂಕಿತರ ನಿವಾಸದ ಬಳಿ ಹೋಗದಂತೆ ಸೂಚಿಸಲಾಗಿದ್ದು, ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ನಗರಸಭೆಗೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ. ಈ ಮೂರು ಕೇಸ್‌ ಮೂಲಕ ಕರ್ನಾಟಕದಲ್ಲಿ ಸೊಂಕಿತರ ಸಂಖ್ಯೆ 91ಕ್ಕೆ ಏರಿಕೆಯಾದಂತಾಗಿದೆ. ಇನ್ನಾದರೂ ಜನರು ಎಚ್ಚೆತ್ತುಕೊಳ್ಳದಿದ್ದರೆ ಗ್ರಾಮಗಳಿಗೆ ಸೊಂಕು ಹರುಡುವುದರಲ್ಲಿ ಅನುಮಾನವಿಲ್ಲ.

LEAVE A REPLY

Please enter your comment!
Please enter your name here